Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:32 - ಕನ್ನಡ ಸತ್ಯವೇದವು C.L. Bible (BSI)

32 ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ ಆಹಾರ ದ್ರಾಕ್ಷೇತೋಟ ಎಣ್ಣೇಮರ ಜೇನುತುಪ್ಪ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡುಹೋಗುವೆನು; ನೀವು ಸಾಯುವದಿಲ್ಲ, ಬದುಕುವಿರಿ. ಯೆಹೋವನು ನಮ್ಮನ್ನು ರಕ್ಷಿಸುವನು ಎಂದು ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:32
16 ತಿಳಿವುಗಳ ಹೋಲಿಕೆ  

ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.


ಅವನು ಇಸ್ರಯೇಲರನ್ನು ಸೆರೆಹಿಡಿದು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.


ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು