2 ಅರಸುಗಳು 18:35 - ಕನ್ನಡ ಸತ್ಯವೇದವು C.L. Bible (BSI)35 ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.