2 ಅರಸುಗಳು 19:10 - ಕನ್ನಡ ಸತ್ಯವೇದವು C.L. Bible (BSI)10 “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು. ಅಧ್ಯಾಯವನ್ನು ನೋಡಿ |
ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.