Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:15 - ಕನ್ನಡ ಸತ್ಯವೇದವು C.L. Bible (BSI)

15 “ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:15
36 ತಿಳಿವುಗಳ ಹೋಲಿಕೆ  

ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II


ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


“ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ದಾವೀದನೂ ಜನರೂ ಜುದೇಯದಲ್ಲಿ ‘ಬಾಳಾ’ ಎಂದು ಹೆಸರುಗೊಂಡಿದ್ದ ಕಿರ್ಯತ್ಯಾರೀಮ ಪಟ್ಟಣಕ್ಕೆ ಮಂಜೂಷವನ್ನು ತರಲು ಹೋದರು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನರಾಗಿರುವ ಸರ್ವೇಶ ದೇವರ ನಾಮದಿಂದ ಸುಪ್ರಸಿದ್ಧವಾಗಿತ್ತು.


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಶೋಭಿಸು ಎಫ್ರಯಿಮ್, ಬೆನ್ಯಮಿನ್, ಮನಸ್ಸೆ ಕುಲಗಳ ಮುಂದೆ I ತೋರ್ಪಡಿಸು ನಿನ್ನ ಶೌರ್ಯವನು, ಬಂದು ಜಯಪ್ರದನಾಗು ನಮಗೆ II


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು