Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ದಯವಿಟ್ಟು ನನ್ನ ಮಾತುಗಳನ್ನು ಆಲಿಸು! ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು, ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪನಾದ ದೇವರನ್ನು ನಿಂದಿಸಿ ಕಳುಹಿಸಿರುವ ಈ ವಾಕ್ಯವನ್ನು ಕೇಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:16
11 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ I ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ II


“ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು