2 ಅರಸುಗಳು 19:17 - ಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನೇ, ಅಶ್ಶೂರದ ರಾಜರು ಆ ರಾಜ್ಯಗಳನ್ನೆಲ್ಲ ನಾಶಗೊಳಿಸಿದ್ದು ನಿಜ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅಧ್ಯಾಯವನ್ನು ನೋಡಿ |
ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.