Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:2 - ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ ಅವರಿಗೆ ಆಜ್ಞಾಪಿಸಿದ್ದೇನಂದರೆ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:2
13 ತಿಳಿವುಗಳ ಹೋಲಿಕೆ  

ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ :


ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ : “ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ’ ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ.


ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ.


ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗ ಯೆಶಾಯನೆಂಬ ಪ್ರವಾದಿ ಬರೆದಿದ್ದಾನೆ.


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು.


ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.


ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,


ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು : “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು