Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:22 - ಕನ್ನಡ ಸತ್ಯವೇದವು C.L. Bible (BSI)

22 ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ಯಾರನ್ನು ನಿಂದಿಸಿ ಪರಿಹಾಸ್ಯ ಮಾಡಿದೆ? ನೀನು ಯಾರ ವಿರುದ್ಧ ಮಾತನಾಡಿದೆ? ನೀನು ಇಸ್ರೇಲಿನ ಪವಿತ್ರನಿಗೆ ವಿರೋಧಿಯಲ್ಲವೆ! ನೀನು ಅವನಿಗಿಂತ ಉತ್ತಮನಂತೆ ನಟಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:22
22 ತಿಳಿವುಗಳ ಹೋಲಿಕೆ  

ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಮೇಲಿಂದ ಮೇಲಕ್ಕೆ ದೃಷ್ಟಿಸಿ ನೋಡುವ, ಠೀವಿಯಿಂದ ಕಣ್ಣುರೆಪ್ಪೆಗಳನ್ನೇರಿಸುವ ಜನರುಂಟು.


ನಾಕವನೆ ತಾಕುತಿದೆ ಅವರ ಗರ್ವದ ನುಡಿ I ಜಗದಲಿ ಹರಡುತಿದೆ ಅವರ ದರ್ಪದ ನುಡಿ II


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ, ‘ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ಪದೇಪದೇ ಪರೀಕ್ಷಿಸಿದರು ದೇವರನು I ಕೆಣಕಿದರು ಇಸ್ರಯೇಲರ ಸದಮಲನನು II


ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.


ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು