Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:25 - ಕನ್ನಡ ಸತ್ಯವೇದವು C.L. Bible (BSI)

25 “ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕೇಳು, ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಆದರೆ ನೀನು ಕೇಳಿಲ್ಲವೇ? ನಾನು ಬಹುಕಾಲದ ಹಿಂದೆಯೇ ಅದನ್ನು ಯೋಜಿಸಿದ್ದೆನು. ಪುರಾತನ ಕಾಲದಿಂದಲೇ ಅದನ್ನು ಆಲೋಚಿಸಿದ್ದೆನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ನೀನು ಬಲಾಢ್ಯ ನಗರಗಳನ್ನು ಹಾಳುದಿಬ್ಬಗಳನ್ನಾಗಿ ಮಾಡಲು ಅವಕಾಶ ನೀಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ ‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:25
11 ತಿಳಿವುಗಳ ಹೋಲಿಕೆ  

ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.


ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು