Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:28 - ಕನ್ನಡ ಸತ್ಯವೇದವು C.L. Bible (BSI)

28 ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ನನಗೆ ವಿರೋಧವಾಗಿ ಉಬ್ಬಿಕೊಂಡಿರುವದೂ ಕುಪಿತನಾಗಿರುವದೂ ನನಗೆ ತಿಳಿದು ಬಂತು. ಆದದರಿಂದ ನಿನಗೆ ಮೂಗುದಾಣವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:28
25 ತಿಳಿವುಗಳ ಹೋಲಿಕೆ  

ನಾನು ನಿನ್ನ ದವಡೆಗಳಿಗೆ ಗಾಳಹಾಕುವೆನು; ನಿನ್ನ ನದಿಯ ಮೀನುಗಳು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯೆಯಿಂದ ಈಚೆಗೆ ಎಳೆಯುವೆನು.


ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು.


“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


ಇಗೋ, ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ, ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆಯುವೆನು. ಅಶ್ವಾರೂಢರು, ಖೇಡ್ಯಪ್ರಾಣಿಗಳು, ಎಲ್ಲ ವಿಚಿತ್ರಾಂಬರು ಹಾಗು ಖಡ್ಗಹಸ್ತರು ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು,


ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.


ಅದರ ಮೂಗಿಗೆ ಆಪನು ಪೋಣಿಸಬಲ್ಲೆಯಾ? ಅದರ ದವಡೆಗೆ ಮುಳ್ಳನು ಚುಚ್ಚಬಲ್ಲೆಯಾ?


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


“ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ.


ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಒಯ್ದವು ಅದನ್ನು ಬಾಬಿಲೋನಿನ ಅರಸನ ಬಳಿಗೆ ಬಿಗಿದು ಸರಪಣಿ, ಹಾಕಿ ಪಂಜರದೊಳಗೆ. ಅದರ ಗರ್ಜನೆ ಇಸ್ರಯೇಲಿನ ಗಿರಿಗಳಿಗೆ ಕೇಳಿಸದಂತೆ, ಸೇರಿಸಿಬಿಟ್ಟವು ಅದನ್ನು ಸುಭದ್ರ ಕೋಟೆಯೊಳಗೆ.


ದಂಗೆಯೆದ್ದಿಹರಿದೋ ನಿನ್ನ ಶತ್ರುಗಳು I ತಲೆಯೆತ್ತಿಕೊಂಡಿಹರು ನಿನ್ನ ದ್ವೇಷಿಗಳು II


ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು II


ವೈರಿಗಳಾರ್ಭಟ ನಿನ್ನ ದರ್ಶನಾಲಯದ ಮಧ್ಯೆಯಲಿ I ಅವರ ಜಯ ಬಾವುಟ ಪವಿತ್ರ ಚಿಹ್ನೆಗಳಿಗೆ ಪ್ರತಿಯಾಗಿ II


ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.


ಅದರ ಹೊರ ಕವಚವನು ಬಿಚ್ಚಬಲ್ಲವರಾರು? ಅದರ ಜೊಡುದವಡೆಗಳಲಿ ನುಗ್ಗಬಲ್ಲವರಾರು?


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು