2 ಅರಸುಗಳು 19:3 - ಕನ್ನಡ ಸತ್ಯವೇದವು C.L. Bible (BSI)3 ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ದಿವಸದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ; ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ. ಅಧ್ಯಾಯವನ್ನು ನೋಡಿ |
ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.