Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:31 - ಕನ್ನಡ ಸತ್ಯವೇದವು C.L. Bible (BSI)

31 ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಆಗ್ರಹವೇ ಇದನ್ನು ನೆರವೇರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜೆರುಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು; ಚಿಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಸ್ವಾಭಿಮಾನವೇ ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:31
17 ತಿಳಿವುಗಳ ಹೋಲಿಕೆ  

ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ.


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.


‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.


ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು