Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:34 - ಕನ್ನಡ ಸತ್ಯವೇದವು C.L. Bible (BSI)

34 ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:34
21 ತಿಳಿವುಗಳ ಹೋಲಿಕೆ  

ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.


ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.


ಹಕ್ಕಿಗಳು ಹಾರಾಡುತ್ತಾ ತನ್ನ ಮರಿಗಳನ್ನು ಕಾಪಾಡುವಂತೆ, ಸೇನಾಧೀಶ್ವರ ಸರ್ವೇಶ್ವರನಾದ ನಾನು ಜೆರುಸಲೇಮನ್ನು ಕಾಪಾಡುವೆನು. ಅದನ್ನು ಸಂರಕ್ಷಿಸಿ ಕಾಯುವೆನು, ಅಪಾಯದಿಂದ ತಪ್ಪಿಸುವೆನು.”


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.”


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.


ಆದರೂ ನನ್ನ ಹೆಸರು ಕೆಡದಂತೆ ತಡೆಹಿಡಿವೆನು ನಿನ್ನ ಮೇಲಣ ಕೋಪವನು; ನನ್ನ ಕೀರ್ತಿಗೆ ಕಳಂಕ ಬಾರದಂತೆ ತಾಳಿಕೊಳ್ಳುವೆನು, ನಿರ್ಮೂಲಮಾಡದೆ ನಿನ್ನನು.


ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು