2 ಅರಸುಗಳು 19:35 - ಕನ್ನಡ ಸತ್ಯವೇದವು C.L. Bible (BSI)35 ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರಮಂದಿ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡುವಲ್ಲಿ ಪಾಳೆಯತುಂಬಾ ಹೆಣಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು. ಅಧ್ಯಾಯವನ್ನು ನೋಡಿ |
‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.