2 ಅರಸುಗಳು 19:37 - ಕನ್ನಡ ಸತ್ಯವೇದವು C.L. Bible (BSI)37 ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರಾರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಸನ್ಹೇರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅವನನ್ನು ಖಡ್ಗದಿಂದ ಇರಿದುಕೊಂದರು. ನಂತರ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ಹೇರೀಬನ ಮಗನಾದ ಏಸರ್‌ಹದ್ದೋನನು ಅವನ ನಂತರ ಹೊಸ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |