Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:4 - ಕನ್ನಡ ಸತ್ಯವೇದವು C.L. Bible (BSI)

4 ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:4
34 ತಿಳಿವುಗಳ ಹೋಲಿಕೆ  

ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.


ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು,


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ಅಳಿದು ಉಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.


‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೊಂದು ಹೊರೆ. ಜೀವಸ್ವರೂಪರಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.


“ನಿಮ್ಮ ವಿಜ್ಞಾಪನೆಯನ್ನು ಸರ್ವೇಶ್ವರನಿಗೆ ಅರಿಕೆ ಮಾಡುವುದಕ್ಕಾಗಿ ನನ್ನನ್ನು ನೀವು ಕಳುಹಿಸಿದ್ದಿರಲ್ಲವೆ? ಅದಕ್ಕೆ ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ:


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.


ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು.


ನೀನು ನಿನ್ನ ದೂತರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ, ಅಲ್ಲದೆ ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ: ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ! ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ ಒಳಹೊಕ್ಕಿದ್ದೇನೆ ಅಲ್ಲಿನ ದೂರದ ನಿವಾಸಸ್ಥಳಗಳನ್ನೇ, ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡು ಮೇಡುಗಳನ್ನೇ!


ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು