Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:6 - ಕನ್ನಡ ಸತ್ಯವೇದವು C.L. Bible (BSI)

6 “ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ, ‘ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ; ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:6
24 ತಿಳಿವುಗಳ ಹೋಲಿಕೆ  

ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು.


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.


ಅದು ಬಾಯಿ ತೆರೆದು ದೇವರನ್ನು ದೂಷಿಸಿತು; ಅವರ ನಾಮವನ್ನು ಶಪಿಸಿತು. ಅವರ ಆಲಯವನ್ನು, ಅಂದರೆ ಸ್ವರ್ಗನಿವಾಸಿಗಳೆಲ್ಲರನ್ನೂ ತೆಗಳಿತು.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು II


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲೇ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.


ಆಗ ಎಲೀಷನು, “ಹೆದರಬೇಡ; ಅವರ ಕಡೆ ಇರುವವರಿಗಿಂತಲೂ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದು ಹೇಳಿ,


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು,


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


“ನಿಮ್ಮ ವಿಜ್ಞಾಪನೆಯನ್ನು ಸರ್ವೇಶ್ವರನಿಗೆ ಅರಿಕೆ ಮಾಡುವುದಕ್ಕಾಗಿ ನನ್ನನ್ನು ನೀವು ಕಳುಹಿಸಿದ್ದಿರಲ್ಲವೆ? ಅದಕ್ಕೆ ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ:


ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು