Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:7 - ಕನ್ನಡ ಸತ್ಯವೇದವು C.L. Bible (BSI)

7 ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಸಂಹೃತನಾಗುವಂತೆ ಮಾಡುವೆನು ಎಂಬದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಅವನಲ್ಲಿ ಒಂದು ಆತ್ಮವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:7
17 ತಿಳಿವುಗಳ ಹೋಲಿಕೆ  

ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.


ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,


ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ನಾನು ಬಾಬಿಲೋನಿನ ಮೇಲೂ ಅದರ ಲೇಬ್‍ಕಾಮೈ ಪ್ರಜೆಗಳ ಮೇಲೂ ವಿನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


“ಎದೋಮೇ, ಸರ್ವೇಶ್ವರನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ. ‘ನೀವು ಒಟ್ಟಿಗೆ ಸೇರಿ ಯುದ್ಧಕ್ಕೆ ಹೊರಟು, ಎದೋಮಿನ ಮೇಲೆ ದಾಳಿಮಾಡಿರಿ’ ಎಂದು ಸೇವಕನ ಮೂಲಕ ರಾಷ್ಟ್ರಗಳಿಗೆ ಹೀಗೆ ಹೇಳಿಕಳುಹಿಸಿದ್ದಾರೆ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಅಂಥವರು ದೇವರ ಉಸಿರಿನಿಂದಲೆ ನಾಶವಾಗುವರು ಆತನ ಸಿಟ್ಟಿನಿಂದಲೆ ಸತ್ತುಹೋಗುವರು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”


ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು.


ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು