2 ಅರಸುಗಳು 19:8 - ಕನ್ನಡ ಸತ್ಯವೇದವು C.L. Bible (BSI)8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ, ಅಸ್ಸೀರಿಯದ ಅರಸನು ಲಾಕೀಷನನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿ |