Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:11 - ಕನ್ನಡ ಸತ್ಯವೇದವು C.L. Bible (BSI)

11 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:11
13 ತಿಳಿವುಗಳ ಹೋಲಿಕೆ  

“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು