Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:12 - ಕನ್ನಡ ಸತ್ಯವೇದವು C.L. Bible (BSI)

12 ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಲೀಷನು ಅದನ್ನು ನೋಡುತ್ತಾ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಗಳಾಗಿದ್ದವನೇ ಎಂದು ಕೂಗಿ ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲೀಷನು ಅದನ್ನು ನೋಡಿ, “ನನ್ನ ತಂದೆಯೇ! ನನ್ನ ತಂದೆಯೇ! ಇಸ್ರೇಲಿಗೆ ರಥರಥಾಶ್ವಗಳೂ ಮತ್ತು ಅಶ್ವದಳವೂ ಆಗಿದ್ದವನೇ!” ಎಂದು ಕೂಗಿಕೊಂಡನು. ಎಲೀಷನು ಎಲೀಯನನ್ನು ಮತ್ತೆ ನೋಡಲಿಲ್ಲ. ಎಲೀಷನು ತನ್ನ ಬಟ್ಟೆಗಳನ್ನು ಹಿಡಿದುಕೊಂಡು, ತನ್ನ ದುಃಖವನ್ನು ತೋರ್ಪಡಿಸಲು ಅವುಗಳನ್ನು ಹರಿದು ತುಂಡುತುಂಡು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:12
28 ತಿಳಿವುಗಳ ಹೋಲಿಕೆ  

ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.


ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.


ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.


ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.


ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು).


ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ : “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು : ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -


ಹೀಗೆಂದು ಪ್ರಾರ್ಥನೆ ಮಾಡಿದನು :


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಸತ್ಪುರುಷರ ಆಶೀರ್ವಾದದಿಂದ ಪುರೋದ್ಧಾರ; ದುಷ್ಟಜನರ ಕೆಟ್ಟ ಬಾಯಿಂದ ಅದರ ಸಂಹಾರ.


ಆತ ವಿಮೋಚಿಸುತ್ತಾನೆ ನಿರ್ದೋಷಿಗಳನು ನಿನ್ನ ಕೈ ಶುದ್ಧವಿರಲಿ ವಿಮೋಚಿಸುವನು ನಿನ್ನನು.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು.


ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.


ಇಸ್ರಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, ‘ಅಪ್ಪಾ ಗುರುವೇ, ಇವರನ್ನು ಸಂಹರಿಸಲೇ?, ಸಂಹರಿಸಲೇ?’ ಎಂದು ಕೇಳಿದನು.


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗಿರು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನು, ಉಡಿಗೆತೊಡಿಗೆಯನ್ನು ಹಾಗು ಆಹಾರವನ್ನು ಕೊಡುತ್ತೇನೆ,” ಎನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು