2 ಅರಸುಗಳು 2:14 - ಕನ್ನಡ ಸತ್ಯವೇದವು C.L. Bible (BSI)14 “ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಎಲೀಯನ ದೇವರಾದ ಯೆಹೋವನೆಲ್ಲಿ ಅಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು; ಅವನು ದಾಟಿಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು. ಅಧ್ಯಾಯವನ್ನು ನೋಡಿ |
ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).