ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”
ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು.