2 ಅರಸುಗಳು 2:21 - ಕನ್ನಡ ಸತ್ಯವೇದವು C.L. Bible (BSI)21 ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ತಂದುಕೊಡಲು ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ - ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “‘ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ಈ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, “ ‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |