Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:5 - ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:5
18 ತಿಳಿವುಗಳ ಹೋಲಿಕೆ  

ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು).


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.


ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.


ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.


ಅದಕ್ಕೆ ಪೌಲನು, “ನಾನು ಹುಚ್ಚನಲ್ಲ, ಫೆಸ್ತ ಮಹಾಪ್ರಭೂ, ನಾನು ಆಡುತ್ತಿರುವುದು ತಿಳಿಮನಸ್ಸಿನಿಂದಾಡುವ ಸತ್ಯ.


ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.


ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳ ಬಹಳ ಇಕ್ಕಟ್ಟಾಗಿದೆ.


ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು