Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:8 - ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:8
12 ತಿಳಿವುಗಳ ಹೋಲಿಕೆ  

ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.


ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ಅವನು ಮತ್ತೆ, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆಕೆ, “ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕ ಬರುತ್ತಿದ್ದಾನೆ,” ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದಮಟ್ಟಿಗೂ ಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು