Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:9 - ಕನ್ನಡ ಸತ್ಯವೇದವು C.L. Bible (BSI)

9 ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಆಚೇದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು - ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತೀ ಹೇಳು ಎಂದು ಕೇಳಿದನು. ಅದಕ್ಕೆ ಎಲೀಷನು - ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ದಾಟಿಹೋದ ತರುವಾಯ, ಎಲೀಯನು ಎಲೀಷನಿಗೆ, “ನಾನು ನಿನ್ನನ್ನು ಬಿಟ್ಟುಹೋಗುವುದಕ್ಕೆ ಮುಂಚೆ, ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು,” ಎಂದನು. ಅದಕ್ಕೆ ಎಲೀಷನು, “ನಿನ್ನ ಆತ್ಮದ ಎರಡು ಪಾಲನ್ನು ನಾನು ಬಾಧ್ಯವಾಗಿ ಹೊಂದುವಂತೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:9
23 ತಿಳಿವುಗಳ ಹೋಲಿಕೆ  

ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಪ್ರೇಷಿತರು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಅವರು ಪವಿತ್ರಾತ್ಮ ವರವನ್ನು ಪಡೆದರು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ:


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II


ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು