Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದವರು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಂತರ ಪ್ರವಾದಿಯಾದ ಯೆಶಾಯನು ರಾಜನಾದ ಹಿಜ್ಕೀಯನ ಬಳಿಗೆ ಬಂದು, “ಈ ಜನರು ಹೇಳುವುದೇನು? ಇವರು ಎಲ್ಲಿಂದ ಬಂದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹಳ ದೂರದೇಶದಿಂದ, ಬಾಬಿಲೋನಿನಿಂದ ಬಂದಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:14
19 ತಿಳಿವುಗಳ ಹೋಲಿಕೆ  

ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


ತಾವೂ ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಯೇಲರಿಗೂ, “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಿ,” ಎಂದು ಕೇಳಿಕೊಂಡರು.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರಲಿಲ್ಲ.


ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಡವೆ ವಸ್ತು ಒಂದೂ ಇಲ್ಲ,” ಎಂದನು.


ಸಮಸ್ತ ಕಸ್ದೀಯರು, ಪಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಸ್ಸೀರಿಯರೆಲ್ಲರನ್ನೂ ನಾನು ನಿನಗೆ ವಿರುದ್ಧ ಎಬ್ಬಿಸಿ, ಎಲ್ಲ ಕಡೆಯಿಂದಲೂ ನಿನ್ನ ಮೇಲೆ ಬೀಳುವಂತೆ ಮಾಡುವೆನು.


ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿ ತಂಗಿರುವ ಆ ಜನರು ಯಾರು?” ಎಂದು ವಿಚಾರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು