Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:19 - ಕನ್ನಡ ಸತ್ಯವೇದವು C.L. Bible (BSI)

19 ‘ನನ್ನ ಜೀವಮಾನದಲ್ಲಿ ಹೇಗೂ ಸೌಭಾಗ್ಯವಿದ್ದರೆ ಸಾಕು’ ಎಂದುಕೊಂಡ ಹಿಜ್ಕೀಯನು ಯೆಶಾಯನಿಗೆ, “ನೀವು ತಿಳಿಸಿದ ಸರ್ವೇಶ್ವರನ ಮಾತು ಹಿತಕರವಾಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಜೀವಮಾನದಲ್ಲಿ ಹೇಗೂ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:19
15 ತಿಳಿವುಗಳ ಹೋಲಿಕೆ  

ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಜೀವಾತ್ಮನಾದ ಮಾನವನು ತನ್ನ ಪಾಪದ ಶಿಕ್ಷೆಗಾಗಿ ಗೊಣಗುಟ್ಟುವುದೆಂತು?


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಮೊರ್ದೆಕೈ, ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೂ ಆ ಪತ್ರಗಳನ್ನು ಕಳುಹಿಸಿದನು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಹಿಜ್ಕೀಯನ ಉಳಿದ ಚರಿತ್ರೆ, ಅವನ ಪರಾಕ್ರಮಕಾರ್ಯ ಹಾಗು ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರ, ಇವು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅದಕ್ಕೆ ಶಿಮ್ಮಿಯು, “ಒಳ್ಳೆಯದು; ನನ್ನ ಒಡೆಯರೂ ಅರಸರೂ ಆದ ನೀವು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು,” ಎಂದು ಉತ್ತರಕೊಟ್ಟು ಬಹಳ ದಿನಗಳವರೆಗೆ ಜೆರುಸಲೇಮಿನಲ್ಲೇ ವಾಸಿಸುತ್ತಿದ್ದನು.


ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.


ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು