Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:3 - ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:3
47 ತಿಳಿವುಗಳ ಹೋಲಿಕೆ  

ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.


‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.


ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಸರ್ವೇಶ್ವರನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಅವರ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಗೊಳ್ಳಿರಿ.”


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ಸ್ಮರಿಸಿಕೋ ದಾಸನೆನಗೆ ನೀನಿತ್ತಾ ಮಾತನು I ಹುಟ್ಟಿಸಿರುವೆ ನನ್ನೊಳು ನಂಬಿಕೆ, ನಿರೀಕ್ಷೆಗಳನು II


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ನೆನೆಸಿಕೊ ಪ್ರಭು, ನಿನ್ನ ಅಪಮಾನಿತ ಸೇವಕನನು I ಸ್ಮರಿಸಿಕೊ ಆತ ಹೊತ್ತಿರುವ ಪರರ ನಿಂದೆಯನು II


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ,


ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲೇ ಸರ್ವೇಶ್ವರ ಅವನಿಗೆ,


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಕೈಬಿಡದ ನಿನ್ನೊಲವು ನನ್ನ ಕಣ್ಮುಂದಿದೆ I ನೀ ತೋರಿದ ಸತ್ಯಪಥದಲಿ, ನಾ ನಡೆದೆ II


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ನಿನ್ನ ನಂಬಿಕೆಗೆ ಆಧಾರ ನಿನ್ನ ಭಯಭಕ್ತಿಯಲ್ಲವೆ? ನಿನ್ನ ನಿರೀಕ್ಷೆಗೆ ಅಸ್ತಿವಾರ ನಿನ್ನ ಆದರ್ಶವಲ್ಲವೆ?


ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.


ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II


ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II


ನನ್ನ ಗತನಡತೆಯನು ಕೇಳಿ ಸದುತ್ತರಿಸಿದೆಯಯ್ಯಾ I ನಿನ್ನ ನಿಬಂಧನೆಗಳನೀಗ ನನಗೆ ಉಪದೇಶಿಸಯ್ಯಾ II


ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು