Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:5 - ಕನ್ನಡ ಸತ್ಯವೇದವು C.L. Bible (BSI)

5 “ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:5
44 ತಿಳಿವುಗಳ ಹೋಲಿಕೆ  

“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: ” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ:


ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.


“ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು.


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲೇ ಸರ್ವೇಶ್ವರ ಅವನಿಗೆ,


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ತತ್ತರಿಸುವರು ಶತ್ರುಗಳೆಲ್ಲ ನಿರಾಶೆಯಿಂದ I ತಟ್ಟನೆ ಹಿಂಜರಿಯುವರವರೆಲ್ಲ ಅತಿ ಲಜ್ಜೆಯಿಂದ II


ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II


ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II


ನನ್ನ ಗತನಡತೆಯನು ಕೇಳಿ ಸದುತ್ತರಿಸಿದೆಯಯ್ಯಾ I ನಿನ್ನ ನಿಬಂಧನೆಗಳನೀಗ ನನಗೆ ಉಪದೇಶಿಸಯ್ಯಾ II


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು