Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:7 - ಕನ್ನಡ ಸತ್ಯವೇದವು C.L. Bible (BSI)

7 ಯೆಶಾಯನು ಒಂದು ಅಂಜೂರದ ಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಶಾಯನು ಒಂದು ಅಂಜೂರಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಶಾಯನು, “ಅಂಜೂರದ ಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು. ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಕೀಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಕೀಯನಿಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:7
5 ತಿಳಿವುಗಳ ಹೋಲಿಕೆ  

ಯೆಶಾಯನು ಹಿಜ್ಕೀಯನಿಗೆ ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ, ‘ನಿನ್ನ ಕುರುವಿನ ಮೇಲೆ ಕಟ್ಟು, ಆಗ ನೀನು ಗುಣಹೊಂದುವೆ,” ಎಂದು ಹೇಳಲು


ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು.


ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.


ಹಿಜ್ಕೀಯನು ಯೆಶಾಯನನ್ನು, “ಸರ್ವೇಶ್ವರ ನನ್ನನ್ನು ಗುಣಪಡಿಸುವರೆಂಬುದಕ್ಕೂ ನಾನು ಮೂರನೆ ದಿನ ಅವರ ಆಲಯಕ್ಕೆ ಹೋಗುವೆನೆಂಬುದಕ್ಕೂ ಗುರುತೇನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು