2 ಅರಸುಗಳು 20:9 - ಕನ್ನಡ ಸತ್ಯವೇದವು C.L. Bible (BSI)9 ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಯೆಹೋವನಿಂದ ಗುರುತು ಕೇಳುತ್ತೀ; ಹಾಗಾದರೆ ನೆರಳು ಹತ್ತು ಮೆಟ್ಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |