Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:12 - ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ಇಸ್ರಯೇಲ್ ದೇವರಾದ ಸರ್ವೇಶ್ವರ ಎಂಬ ನಾನು ಜೆರುಸಲೇಮಿನವರ ಮೇಲೂ ಜುದೇಯದವರ ಮೇಲೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವರ ಎರಡು ಕಿವಿಗಳೂ ಬಿರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಯೆರೂಸಲೇವಿುನವರ ಮೇಲೆಯೂ ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಇಸ್ರೇಲಿನ ದೇವರು ಹೀಗೆನ್ನುತ್ತಾನೆ: ‘ಇಗೋ, ಜೆರುಸಲೇಮಿಗೂ ಯೆಹೂದಕ್ಕೂ ಎಷ್ಟು ತೊಂದರೆಯನ್ನು ತರುತ್ತೇನೆಂದರೆ, ಅದನ್ನು ಕೇಳಿದ ಯಾರಾದರೂ ನಡುಗಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಸ್ರಾಯೇಲಿನ ಯೆಹೋವ ದೇವರಾದ ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳು ಕಿರಗುಟ್ಟುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:12
12 ತಿಳಿವುಗಳ ಹೋಲಿಕೆ  

‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು!


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


‘ಈ ನಾಡಿನ ಮೇಲೆ ಹಾಗು ಜನರ ಮೇಲೆ ಜುದೇಯದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು;


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು