Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:18 - ಕನ್ನಡ ಸತ್ಯವೇದವು C.L. Bible (BSI)

18 ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು “ಉಜ್ಜನ ವನ”ದಲ್ಲಿ ಸಮಾಧಿಮಾಡಿದರು. ಈ ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು, ಅವನ ಅರಮನೆಯ ತೋಟವಾದ ಉಜ್ಜನ ತೋಟದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:18
13 ತಿಳಿವುಗಳ ಹೋಲಿಕೆ  

ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.


ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗಾಗಿ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನ ಸ್ಥಾನದಲ್ಲಿ ಅವನ ಮಗ ಯೋಷೀಯನು ಅರಸನಾದನು.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.


ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.


ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.


ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.


ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).


ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು. ಯೊಟ್ಟಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆ ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು