2 ಅರಸುಗಳು 21:3 - ಕನ್ನಡ ಸತ್ಯವೇದವು C.L. Bible (BSI)3 ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿ |