Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:7 - ಕನ್ನಡ ಸತ್ಯವೇದವು C.L. Bible (BSI)

7 ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:7
25 ತಿಳಿವುಗಳ ಹೋಲಿಕೆ  

ನನ್ನ ನಾಮ ಮಹಿಮೆ ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗಾಗಿ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲಿ ಇರುವುವು.


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ಅನ್ಯದೇವತಾ ಪ್ರತಿಮೆಗಳನ್ನು ಹಾಗು ತಾನು ಮಾಡಿಸಿದ್ದ ಸ್ತಂಭವನ್ನು ಸರ್ವೇಶ್ವರನ ಆಲಯದಿಂದ ತೆಗಿಸಿದನು. ಸರ್ವೇಶ್ವರನ ಮಂದಿರವಿರುವ ಗುಡ್ಡದಲ್ಲೂ ಜೆರುಸಲೇಮಿನಲ್ಲೂ ಕಟ್ಟಿಸಿದ್ದ ಎಲ್ಲ ಯಜ್ಞವೇದಿಗಳನ್ನು ಕೆಡವಿ, ಅವುಗಳನ್ನು ಪಟ್ಟಣದ ಹೊರಗೆ ಹಾಕಿಸಿದನು.


ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;


ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.


ಬಳಿಕ ಸರ್ವೇಶ್ವರ ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷರಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಆಲಿಸಿ, ಈ ಮನೆಯನ್ನು ಬಲಿಯರ್ಪಣಾ ಮಂದಿರಕ್ಕಾಗಿ ಆರಿಸಿಕೊಂಡಿದ್ದೇನೆ.


ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.


ಸರ್ವೇಶ್ವರನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅದನ್ನು ಸುಡಿಸಿ, ಪುಡುಪುಡಿಮಾಡಿಸಿ, ಆ ಪುಡಿಯನ್ನು ಸಾರ್ವಜನಿಕ ಸ್ಮಶಾನದಲ್ಲಿ ಹಾಕಿಸಿದನು.


ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


“ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು.


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


“ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಸರ್ವೇಶ್ವರನಾದ ನಿಮ್ಮನ್ನು ಪ್ರಾರ್ಥಿಸಿದರೆ,


ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಇದಲ್ಲದೆ, ನನಗೆ ಈ ಅಪರಾಧವನ್ನು ನಡೆಸಿದ್ದಾರೆ: ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಶುದ್ಧ ಮಾಡಿದರು.


ಅರಸ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಪೂಜಾಪೀಠವನ್ನು ಮಾಡಿಸಿಬಿಟ್ಟಿದ್ದನು.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು