Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:13 - ಕನ್ನಡ ಸತ್ಯವೇದವು C.L. Bible (BSI)

13 “ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗ್ರಂಥದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:13
37 ತಿಳಿವುಗಳ ಹೋಲಿಕೆ  

ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ಧರ್ಮಶಾಸ್ತ್ರದ ಅರಿವಿಲ್ಲದೆ ಒಮ್ಮೆ ನಾನು ಜೀವಿಸುತ್ತಿದ್ದೆನು; ಆಜ್ಞೆ ಎಂಬುದು ತಲೆದೋರಿದ ಕೂಡಲೇ ಪಾಪಕ್ಕೆ ಜೀವ ಬಂದಿತು.


ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.


ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.


ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ನಮ್ಮ ಪಿತೃಗಳಂತೆಯೆ ಪಾಪಿಗಳು ನಾವು I ಅಕ್ರಮಗೈದೆವು, ಅಪರಾಧಿಗಳಾದೆವು II


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳದಲ್ಲೇ ನಿಂತು, ತಮ್ಮ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಸರ್ವೇಶ್ವರನಿಗೆ ಅಡ್ಡಬಿದ್ದು ಪಾಪಗಳನ್ನು ಅರಿಕೆಮಾಡಿದರು.


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.


ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


“ಆದರೆ ನೀವು ನನ್ನ ಮಾತನ್ನು ಕೇಳದೆ, ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ.


ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು