Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:16 - ಕನ್ನಡ ಸತ್ಯವೇದವು C.L. Bible (BSI)

16 ‘ಈ ನಾಡಿನ ಮೇಲೆ ಹಾಗು ಜನರ ಮೇಲೆ ಜುದೇಯದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:16
18 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.


‘ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಯಾಕ್ಕೆ ಕೊಂಡೊಯ್ಯುವ ದಿನ ಬರುವುದು; ಇಲ್ಲೇನೂ ಉಳಿಯುವುದಿಲ್ಲ.


ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ಆದುದರಿಂದ ಸರ್ವೇಶ್ವರ ಅವರ ನಾಡಿನ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ;


ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತುಗಳನ್ನು ತಿಳಿಸಿರಿ;


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು