Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:18 - ಕನ್ನಡ ಸತ್ಯವೇದವು C.L. Bible (BSI)

18 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲ್‍ದೇವರಾದ ಯೆಹೋವನ ಮಾತೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18-19 “ಯೆಹೂದದ ರಾಜನಾದ ಯೋಷೀಯನು ಯೆಹೋವನ ಸಲಹೆಯನ್ನು ಕೇಳಲು ನಿಮ್ಮನ್ನು ಕಳುಹಿಸಿದನು. ಯೋಷೀಯನಿಗೆ ಈ ಸಂಗತಿಗಳನ್ನು ಹೇಳಿ: ‘ನೀನು ಕೇಳುವ ಈ ಮಾತುಗಳನ್ನು ಇಸ್ರೇಲರ ದೇವರಾದ ಯೆಹೋವನು ಹೇಳಿದನು. ಈ ದೇಶವನ್ನು ಮತ್ತು ಇಲ್ಲಿ ವಾಸಿಸುವ ಜನರನ್ನು ಕುರಿತು ನಾನು ಹೇಳಿದ ಸಂಗತಿಗಳನ್ನು ನೀನು ಕೇಳಿರುವೆ. ನಿನ್ನ ಹೃದಯವು ಮೃದುವಾಗಿರುವುದರಿಂದ, ನೀನು ಅವುಗಳನ್ನು ಕೇಳಿದಾಗ ದೈನ್ಯತೆಯುಳ್ಳವನಾದೆ. ಈ ಸ್ಥಳಕ್ಕೆ (ಜೆರುಸಲೇಮಿಗೆ) ಆ ಭೀಕರ ಸಂಗತಿಗಳಾಗುತ್ತವೆಯೆಂದು ನಾನು ಹೇಳಿದೆ. ಆಗ ನೀನು ದುಃಖದಿಂದ ನಿನ್ನ ಬಟ್ಟೆಗಳನ್ನು ಹರಿದುಕೊಂಡು ಅಳಲಾರಂಭಿಸಿದೆ. ಆದಕಾರಣವೇ ನಾನು ನಿನಗೆ ಕಿವಿಗೊಟ್ಟೆನು.’ ಯೆಹೋವನು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:18
5 ತಿಳಿವುಗಳ ಹೋಲಿಕೆ  

ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.


ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು