2 ಅರಸುಗಳು 22:20 - ಕನ್ನಡ ಸತ್ಯವೇದವು C.L. Bible (BSI)20 ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |