Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:19 - ಕನ್ನಡ ಸತ್ಯವೇದವು C.L. Bible (BSI)

19 ಇಸ್ರಯೇಲ್ ರಾಜರು ಸಮಾರಿಯ ಪಟ್ಟಣಗಳಲ್ಲಿ ಕಟ್ಟಿಸಿದಂಥ ಹಾಗು ಸರ್ವೇಶ್ವರನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳಲ್ಲಿದ್ದ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಕಟ್ಟಿಸಿದಂಥ ಯೆಹೋವನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:19
14 ತಿಳಿವುಗಳ ಹೋಲಿಕೆ  

“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ತಮ್ಮ ದೇವರಾದ ಆ ಸರ್ವೇಶ್ವರನಿಗೆ ವಿರೋಧವಾದ ಕೃತ್ಯಗಳನ್ನು ಗುಪ್ತವಾಗಿ ನಡೆಸಿದರು; ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.


ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು