2 ಅರಸುಗಳು 23:20 - ಕನ್ನಡ ಸತ್ಯವೇದವು C.L. Bible (BSI)20 ಯೋಷೀಯನು ಅವುಗಳನ್ನು ಕೆಡವಿಬಿಟ್ಟು, ಅವುಗಳ ಪೂಜಾರಿಗಳನ್ನು ಬಲಿಪೀಠಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಅವುಗಳ ಮೇಲೆ ಸುಡಿಸಿ ಜೆರುಸಲೇಮಿಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಸುಡಿಸಿ ಯೆರೂಸಲೇವಿುಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.