Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:27 - ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:27
26 ತಿಳಿವುಗಳ ಹೋಲಿಕೆ  

ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.


ಅವನು ಇಸ್ರಯೇಲರನ್ನು ಸೆರೆಹಿಡಿದು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !


ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.


ನಿರಪರಾಧಿಗಳ ಹತ್ಯೆಯಿಂದ ಜೆರುಸಲೇಮನ್ನು ರಕ್ತಮಯವಾಗಿಸಿದ್ದ ಮನಸ್ಸೆಯ ದುಷ್ಕೃತ್ಯಗಳನ್ನು ಸರ್ವೇಶ್ವರ ಕ್ಷಮಿಸದೆ ಹೋದರು;


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಶತ್ರುಗಳೆಲ್ಲಾ ಬಂದು ಅವರನ್ನು ಸುಲಿದು ಸೂರೆಮಾಡುವರು.


ಯೋಷೀಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’


ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು