Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:35 - ಕನ್ನಡ ಸತ್ಯವೇದವು C.L. Bible (BSI)

35 ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ನಾಡಿನಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆ ಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿಬಂಗಾರವನ್ನು ನಾಡಿನ ಜನರಿಂದ ಕೂಡಿಸಿ ಫರೋಹನಿಗೆ ತಂದೊಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ಕರವನ್ನು ನೇವಿುಸಿದನು. ಕರಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ಕೂಡಿಸಿ ಫರೋಹನಿಗೋಸ್ಕರ ತಂದೊಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋಯಾಕೀಮನು ಫರೋಹ ನೆಕೋವನಿಗೆ ಬೆಳ್ಳಿಬಂಗಾರವನ್ನು ಕೊಟ್ಟನು; ಸಾಮಾನ್ಯ ಜನರಿಗೂ ತೆರಿಗೆಗಳನ್ನು ಹಾಕಿ ಬಂದ ಹಣವನ್ನು ಫರೋಹ ನೆಕೋವನಿಗೆ ಕೊಟ್ಟನು. ಆದ್ದರಿಂದ ಪ್ರತಿಯೊಬ್ಬರು ತಮ್ಮ ಪಾಲಿನ ಬೆಳ್ಳಿಬಂಗಾರಗಳನ್ನು ಕೊಟ್ಟರು. ರಾಜನಾದ ಯೆಹೋಯಾಕೀಮನು ಫರೋಹ-ನೆಕೋವನಿಗೆ ಅವುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:35
3 ತಿಳಿವುಗಳ ಹೋಲಿಕೆ  

ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು