Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:36 - ಕನ್ನಡ ಸತ್ಯವೇದವು C.L. Bible (BSI)

36 ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆ ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೆಹೋಯಾಕೀಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಜೆಬೂದಾ. ಆಕೆಯು ರೂಮದ ಪೆದಾಯನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ರೂಮಾ ಊರಿನವಳೂ ಪೆದಾಯನ ಮಗಳೂ ಆದ ಜೆಬೂದಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:36
7 ತಿಳಿವುಗಳ ಹೋಲಿಕೆ  

ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು;


ಅಲ್ಲದೆ, ಜುದೇಯದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಜುದೇಯದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ಜನರು ಸೆರೆಹೋಗುವ ತನಕ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬರುತ್ತಿತ್ತು.


ಯೋಷೀಯನಿಗೆ ನಾಲ್ಕು ಜನಮಕ್ಕಳು: ಯೋಹಾನಾನ್, ಯೆಹೋಯಾಕೀಮ್, ಚಿದ್ಕೀಯ ಮತ್ತು ಶಲ್ಲೂಮ್.


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು