Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:1 - ಕನ್ನಡ ಸತ್ಯವೇದವು C.L. Bible (BSI)

1 ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:1
19 ತಿಳಿವುಗಳ ಹೋಲಿಕೆ  

ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:


ಇದಲ್ಲದೆ, ಈ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರಿಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.


ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:


ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ನಾಡಿನ ಜನರು ಯೋಷೀಯನ ಮಗ ಯೆಹೋವಾಹಾಜನನ್ನು ಅವನ ತಂದೆಗೆ ಬದಲಾಗಿ, ಜೆರುಸಲೇಮಿನಲ್ಲಿ ಅರಸನನ್ನಾಗಿ ಮಾಡಿದರು.


ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


ಯುದ್ಧಕ್ಕೆ ಬೇಕಾದ ವಿವೇಕ ಹಾಗೂ ಶಕ್ತಿ ಉಂಟೆಂಬ ನಿನ್ನ ಮಾತು ಬರೀ ಬಾಯಿಮಾತು ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?


ಆಗ ಬಂದವು ಸುತ್ತಲಿನ ರಾಷ್ಟ್ರಗಳು ಒಟ್ಟುಗೂಡಿ, ಸಿಕ್ಕಿಸಿದವು ಅದನ್ನು ಬಲೆಯೊಡ್ಡಿ, ಗುಂಡಿತೋಡಿ.


ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು