Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:17 - ಕನ್ನಡ ಸತ್ಯವೇದವು C.L. Bible (BSI)

17 ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬವನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಚಿದ್ಕೀಯ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಾಬಿಲೋನ್ ರಾಜನು ಮತ್ತನ್ಯನನ್ನು ಹೊಸ ರಾಜನನ್ನಾಗಿ ನೇಮಿಸಿದನು. ಅವನು ಯೆಹೋಯಾಖೀನನ ಸ್ಥಳವನ್ನು ಪಡೆದನು. ಮತ್ತನ್ಯನು ಯೆಹೋಯಾಖೀನನ ಚಿಕ್ಕಪ್ಪ. ಬಾಬಿಲೋನ್ ರಾಜನು ಮತ್ತನ್ಯನ ಹೆಸರನ್ನು ಚಿದ್ಕೀಯ ಎಂದು ಬದಲಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:17
13 ತಿಳಿವುಗಳ ಹೋಲಿಕೆ  

ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.


ಈಜಿಪ್ಟಿನ ರಾಜ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು; ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ಕರೆದುಕೊಂಡು ಹೋದನು.


ಫರೋಹ ನೆಕೋವನು, ಯೋಷೀಯನಿಗೆ ಬದಲಾಗಿ ಅವನ ಮಗ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು, ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದನು; ಯೆಹೋವಾಹಾಜನು ಅಲ್ಲೆ ಮೃತನಾದನು.


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.


ಅಲ್ಲದೆ, ಜುದೇಯದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಜುದೇಯದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ಜನರು ಸೆರೆಹೋಗುವ ತನಕ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬರುತ್ತಿತ್ತು.


ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.


ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿ ಯೆರೆಮೀಯನಿಗೆ ನೀಡಲಾಯಿತು:


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.


ಆ ಬಾಬಿಲೋನಿನವರು ಇವಳ ರತಿಮಂಚವನ್ನೇರಿ ತಮ್ಮ ಕಾಮತೃಷೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಎಷ್ಟು ಅಶುದ್ಧಳಾದಳೆಂದರೆ ಇವಳಿಗೇ ಅವರ ಬಗ್ಗೆ ಜಿಗುಪ್ಸೆ ಹುಟ್ಟಿತು.


ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು