Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:20
21 ತಿಳಿವುಗಳ ಹೋಲಿಕೆ  

ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.


ಆದುದರಿಂದ ಸರ್ವೇಶ್ವರ ಅವರ ನಾಡಿನ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ;


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು" ಎಂಬ ನಾಡಿನಲ್ಲಿ ವಾಸಮಾಡಿದನು.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ.


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ಆದರೆ ಚಿದ್ಕೀಯನಾಗಲಿ, ಅವನ ಸೇವಕರಾಗಲಿ, ನಾಡಿನ ಜನರಾಗಲಿ ಸರ್ವೇಶ್ವರನು ಪ್ರವಾದಿ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆಹೋದರು.


ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.


ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.


ನಿರಪರಾಧಿಗಳ ಹತ್ಯೆಯಿಂದ ಜೆರುಸಲೇಮನ್ನು ರಕ್ತಮಯವಾಗಿಸಿದ್ದ ಮನಸ್ಸೆಯ ದುಷ್ಕೃತ್ಯಗಳನ್ನು ಸರ್ವೇಶ್ವರ ಕ್ಷಮಿಸದೆ ಹೋದರು;


“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;


ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು