Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:3 - ಕನ್ನಡ ಸತ್ಯವೇದವು C.L. Bible (BSI)

3 ನಿರಪರಾಧಿಗಳ ಹತ್ಯೆಯಿಂದ ಜೆರುಸಲೇಮನ್ನು ರಕ್ತಮಯವಾಗಿಸಿದ್ದ ಮನಸ್ಸೆಯ ದುಷ್ಕೃತ್ಯಗಳನ್ನು ಸರ್ವೇಶ್ವರ ಕ್ಷಮಿಸದೆ ಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರೂಸಲೇಮನ್ನು ನಿರಪರಾಧರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷವಿುಸದೆ ಹೋದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದ ಕಾರಣ ಆತನ ಆಜ್ಞೆಯ ಪ್ರಕಾರ ಈ ಶಿಕ್ಷೆಯು ಅವರಿಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಶ್ಚಯವಾಗಿ ಯೆಹೋವ ದೇವರ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಮನಸ್ಸೆಯು ತನ್ನ ಸಮಸ್ತ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ, ಯೆಹೂದವನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕುವಂತೆ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:3
27 ತಿಳಿವುಗಳ ಹೋಲಿಕೆ  

ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.


ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟುಬಿಟ್ಟದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.


ನೆಬೂಕದ್ನೆಚ್ಚರನು ಸೆರೆಗೆ ಒಯ್ದವರ ಲೆಕ್ಕದ ಪಟ್ಟಿ ಹೀಗಿದೆ; ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು,


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು